Google
 

Friday, January 26, 2007

Araluthiru jeevada geleya.. [Mungaaru malle]

ಅರಳುತಿರು ಜೀವದ ಗೆಳೆಯ ಸ್ನೇಹದಾ ಸಿಂಚನದಲ್ಲಿ
ಬಾಡದಿರು ಸ್ನೇಹದ ಹೂವೇ ಪ್ರೇಮದಾ ಬಂಧನದಲ್ಲಿ
ಮನಸಲ್ಲೇ ಇರಲಿ ಭಾವನೆ
ಮಿಡಿಯುತಿರಲಿ ಮೌನ ವೀಣೆ ಹೀಗೇ ಸುಮ್ಮನೆ

ಹಕ್ಕಿಯು ಹಾಡಿದೆ ತನ್ನ ಹೆಸರನು ಹೇಳದೇ
ಸಂಪಿಗೆ ಬೀರಿದೆ ಕಂಪನು ಯಾರಿಗೂ ಕೇಳದೇ
ಬೀಸುವ ಗಾಳಿಯ ಹಕ್ಕಿಯ ಹಾಡಿನ ನಂಟಿಗೆ ಹೆಸರಿನ ಹೊಂಗಿಲ್ಲ
ನಮಗೇಕೆ ಅದರ ಯೋಚನೆ
ಬೇಡ ಗೆಳೆಯ ನಂಟಿಗೆ ಹೆಸರು ಯಾಕೆ ಸುಮ್ಮನೆ

ಮಾತಿಗೆ ಮೀರಿದ ಭಾವದ ಸೆಳತವೇ ಸುಂದರ
ನಲುಮೆಯು ತುಂಬಿದ ಮನಸಿಗೆ ಬಾರದು ಬೇಸರ
ಬಾಳ ದಾರಿಯಲಿ ಬೇರೆಯಾದರು ಚಂದಿರ ಬರುವನು ನಮ್ಮ ಜ್ಯೊತೆ
ಕಾಣುವೆನು ಅವನಲಿ ನಿನ್ನನೇ
ಇರಲಿ ಗೆಳೆಯ ಈ ಅನುಬಂಧ ಹೀಗೇ ಸುಮ್ಮನೆ..

Mungaaru malleye.. [Mungaaru malle]

ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ
ನಿನ್ನ ಮುಗಿಲ ಸಾಲೇ ಧರೆಯ ಕೊರಳ ಪ್ರೇಮದ ಮಾಲೆ
ಸುರಿವ ಒಲುಮೆಯಾ ಜಡಿ ಮಳೆಗೆ ಪ್ರೀತಿ ಮೂಡಿದೆ
ಯಾವ ಚಿಪ್ಪಿನಲ್ಲಿ ಯಾವ ಹನಿಯು ಮುತ್ತಾಗುವುದೊ

ಒಲವು ಎಲ್ಲಿ ಕುಡಿ ಒಡೆಯುವುದೊ ತಿಳಿಯದಾಗಿದೆ


ಭುವಿ ಕೆನ್ನೆ ತುಂಬ ಮುಗಿಲು ಸುರಿದ ಮುತ್ತಿನ ಗುರುತು
ನನ್ನ ಎದೆಯ ತುಂಬ ಅವಳು ಬಂದ ಹೆಜ್ಜೆಯ ಗುರುತು
ಹೆಜ್ಜೆ ಗೆಜ್ಜೆಯ ಸವಿ ಸದ್ದು ಪ್ರೇಮ ನಾದವೋ
ಎಳೆ ಮುಗಿಲಿನಲ್ಲಿ ರಂಗು ಚೆಲ್ಲಿ ನಿಂತಳು ಅವಳು
ಬರೆದು ಹೆಸರ ಕಾಮನಬಿಲ್ಲು ಏನು ಮೋಡಿಯೋ

ಯಾವ ಹನಿಗಳಿಂದ ಯಾವ ನೆಲವು ಹಸಿರಾಗುವುದೋ
ಯಾರ ಸ್ಪರ್ಶದಿಂದ ಯಾರ ಮನವು ಹಸಿಯಾಗುವುದೋ
ಯಾರ ಹುಸಿರಲ್ಲ್ಯಾರ ಹೆಸರೋ ಯಾರು ಬರೆದರೋ
ಯಾವ ಪ್ರೀತಿ ಹೂವು ಯಾರ ಹೃದಯದಲ್ಲರಳುವುದೋ
ಯಾರ ಪ್ರೇಮ ಪೂಜೆಗೆ ಮುಡಿಪೋ ಯಾರು ಬಲ್ಲರೋ

ಒಲವ ಚಂದಮಾಮ ನಗುತ ಬಂದ ಮನದಂಗಳಕೆ
ಪ್ರೀತಿ ಬೆಳಕಿನಲ್ಲಿ ಹೃದಯ ಹೊರಟಿದೇ ಮೆರವಣಿಗೆ
ಅವಳ ಪ್ರೇಮದೂರಿನ ಕಡೆಗೆ ಪ್ರೀತಿ ಪಯಣವೋ
ಪ್ರಳಯದೂರಿನಲ್ಲಿ ಕಳೆದು ಹೋಗೊ ಸುಖವ ಇಂದು
ಧನ್ಯನಾದೆ ಪಡೆದು ಕೊಂಡು ಹೊಸ ಜನ್ಮವೋ..

Anisuthide yako indu [ Mungaaru malle]

ಅನಿಸುತಿದೆ ಯಾಕೊ ಇಂದು ನೀನೇನೆ ನನ್ನವಳೆಂದು
ಮಾಯದಾ ಲೋಕದಿಂದ ನನಗಾಗಿ ಬಂದವಳೆಂದು
ಆಹಾ ಎಂತಾ ಮಧುರ ಯಾತನೆ
ಕೊಲ್ಲು ಹುಡುಗಿ ಒಮ್ಮೆ ನನ್ನ ಹಾಗೇ ಸುಮ್ಮನೆ

ಸುರಿಯುವ ಸೋನೆಯೂ ಸೂಸಿದೆ ನಿನ್ನದೆ ಪರಿಮಳ
ಇನ್ನ್ಯಾರ ಕನಸಲೂ ನೀನು ಹೋದರೆ ತಳಮಳ
ಪೂರ್ಣ ಚಂದಿರ ರಜ ಹಾಕಿದ ನಿನ್ನಯ ಮೊಗವನು ಕಂಡ ಕ್ಷಣ
ನಾ ಖೈದಿ ನೀನೆ ಸೆರೆಮನೆ
ತಪ್ಪಿ ನನ್ನ ಅಪ್ಪಿಕ್ಕೊ ಒಮ್ಮೆ ಹಾಗೇ ಸುಮ್ಮನೆ

ತುಟಿಗಲ ಹೂವಲಿ ಆಡದ ಮಾತಿನ ಸಿಹಿ ಇದೆ
ಮನಸಿನ ಪುಟದಲಿ ಕೇವಲ ನಿನ್ನದೆ ಸಹಿ ಇದೆ
ಹಣೆಯಲಿ ಬರೆಯದ ನಿನ್ನ ಹೆಸರ ಹೃದಯದಿ ನಾನೇ ಕೊರೆದಿರುವೆ
ನಿನಗುಂಟೆ ಇದರ ಕಲ್ಪನೆ
ನನ್ನ ಹೆಸರ ಕೂಗೆ ಒಮ್ಮೆ ಹಾಗೇ ಸುಮ್ಮನೆ..